varthabharthi


ರಾಷ್ಟ್ರೀಯ

ಕಣ್ಣೂರು: ಘರ್ಷಣೆಯಲ್ಲಿ ಸಿಪಿಎಂ, ಬಿಜೆಪಿ ಕಾರ್ಯಕರ್ತರಿಗೆ ಗಾಯ

ವಾರ್ತಾ ಭಾರತಿ : 14 Sep, 2021

ಕಣ್ಣೂರು, ಸೆ. 14: ಇಲ್ಲಿನ ಮೇಲೂರು ಗ್ರಾಮದಲ್ಲಿ ನಡದೆದ ಘರ್ಷಣೆಯಲ್ಲಿ ಸಿಪಿಎಂ ಹಾಗೂ ಬಿಜೆಪಿ ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಜೆಪಿ ಹಾಗೂ ಸಿಪಿಎಂ ನಡುವೆ ಸೋಮವಾರ ರಾತ್ರಿ ಘರ್ಷಣೆ ಆರಂಭವಾಯಿತು. ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.

ಘರ್ಷಣೆಯಲ್ಲಿ ಬಿಜೆಪಿ ಕಾರ್ಯಕರ್ತ ಗಂಭೀರ ಗಾಯಗೊಂಡಿದ್ದು, ಆತನನ್ನು ಕೋಝಿಕ್ಕೋಡ್ನ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಗಾಯಗೊಂಡ ಸಿಪಿಎಂ ಕಾರ್ಯಕರ್ತ ಮನೀಶ್ನನ್ನು ಇಲ್ಲಿನ ಕೋ-ಆಪರೇಟಿವ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಈ ಪ್ರದೇಶದಲ್ಲಿ ಮತ್ತೆ ಹಿಂಸಾಚಾರ ಸಂಭವಿಸದಂತೆ ಪೊಲೀಸರು ಬೀಡು ಬಿಟ್ಟಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)