ಚಿತ್ರದುರ್ಗ: ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
ಚಿತ್ರದುರ್ಗ, ಸೆ.28: ನಿಂತಿದ್ದ ಲಾರಿಗೆ ಹಿಂಬದಿಯಿಂದ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಇರುವ ಕ್ಯಾದಿಗೆರೆ ಬಳಿ ನಡೆದಿದೆ.
ಮೃತರನ್ನು ಚಿತ್ರದುರ್ಗ ನಗರದ ಕಾಮನಬಾವಿ ಬಡಾವಣೆಯ ಗಣೇಶ(22) ಮತ್ತು ಚೋಳ ಗುಡ್ಡದ ನಿವಾಸಿ ಶಿವು(20) ಎಂದು ಗುರುತಿಸಲಾಗಿದೆ.
ಇವರಿಬ್ಬರು ಚಿತ್ರದುರ್ಗದಿಂದ ಐಮಂಗಲದಲ್ಲಿ ಮನೆಯ ಎಲೆಕ್ಟ್ರಿಕಲ್ ಕೆಲಸಕ್ಕೆ ತೆರಳಿದ್ದು, ವಾಪಾಸ್ಸು ಬರುವಾಗ ಕ್ಯಾದಿಗೆರೆ ಬಳಿ ಈ ಘಟನೆ ನಡೆದಿದೆ ಎಂದು ಪೋಲಿಸರು ತಿಳಿಸಿದ್ದಾರೆ.
ಸ್ಥಳಕ್ಕೆ ಎಸ್ಪಿ ಜಿ.ರಾಧಿಕಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story