varthabharthi


ಕರ್ನಾಟಕ

ರಾಜ್ಯದಲ್ಲಿಂದು 357 ಮಂದಿಗೆ ಕೊರೋನ ದೃಢ: 10 ಮಂದಿ ಸಾವು

ವಾರ್ತಾ ಭಾರತಿ : 13 Oct, 2021

ಬೆಂಗಳೂರು, ಅ.13: ರಾಜ್ಯದಲ್ಲಿ ಬುಧವಾರ 357 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 10 ಜನರು ಸೋಂಕಿಗೆ ಬಲಿಯಾಗಿದ್ದು, 438 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,82,089ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 37,916ಕ್ಕೆ ತಲುಪಿದೆ.

ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 9,621ಕ್ಕೆ ಏರಿಕೆಯಾಗಿದ್ದು, ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

10 ಸೋಂಕಿತರ ಬಲಿ: ಬೆಳಗಾವಿ 1, ಬೆಂಗಳೂರು ನಗರ 5, ದಕ್ಷಿಣ ಕನ್ನಡ 1, ದಾವಣಗೆರೆ 1, ಹಾವೇರಿ 1, ತುಮಕೂರು ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 357 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 140, ಬೀದರ್ 2, ಚಾಮರಾಜನಗರ 4, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 14, ಚಿತ್ರದುರ್ಗ 1, ದಕ್ಷಿಣ ಕನ್ನಡ 35, ದಾವಣಗೆರೆ 1, ಧಾರವಾಡ 2, ಗದಗ 1, ಹಾಸನ 26, ಕೊಡಗು 9, ಕೋಲಾರ 8, ಕೊಪ್ಪಳ 1, ಮಂಡ್ಯ 9, ಮೈಸೂರು 21, ರಾಯಚೂರು 2, ರಾಮನಗರ 2, ಶಿವಮೊಗ್ಗ 9, ತುಮಕೂರು 27, ಉಡುಪಿ 16, ಉತ್ತರ ಕನ್ನಡ 13, ವಿಜಯಪುರ ಜಿಲ್ಲಿಯಲ್ಲಿ 6 ಪ್ರಕರಣ ಪತ್ತೆಯಾಗಿವೆ.

ರಾಜಧಾನಿಯಲ್ಲಿ 140 ಜನರಿಗೆ ಕೊರೋನ ದೃಢ

ಬೆಂಗಳೂರಿನಲ್ಲಿ ಬುಧವಾರ 140 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 5 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,48,744 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,203 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,25,967 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)