ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಉಡುಪಿ, ಅ.21: ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರಕಾರದ ವಿದ್ಯಾರ್ಥಿವೇತನ ಯೋಜನೆಯಡಿ ಎಸೆಸೆಲ್ಸಿ ನಂತರ (ಪೋಸ್ಟ್ ಮ್ಯಾಟ್ರಿಕ್) ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ ಹಾಗೂ ಶುಲ್ಕ ಮರುಪಾವತಿ ಮತ್ತು ಉನ್ನತ ಶಿಕ್ಷಣ, ವೃತ್ತಿ ಶಿಕ್ಷಣ, ತಾಂತ್ರಿಕ ಶಿಕ್ಷಣ ಹಾಗೂ ಸ್ನಾತಕ್ಕೋತ್ತರ ಶಿಕ್ಷಣದಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ ಪ್ರೋತ್ಸಾಹಧನ ನೀಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್-https://ssp.postmatric.karnataka.gov.in/2021- ಮೂಲಕ ಮತ್ತು ಶುಲ್ಕಮರುಪಾವತಿ ಹಾಗೂ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಛೇರಿ ಇಲ್ಲಿ ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ದೂ.ಸಂ: 0820- 2574810/811ನ್ನು ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಪ್ರಕಟಣೆ ತಿಳಿಸಿದೆ.