ದ.ಕ. ಜಿಲ್ಲೆ : 34 ಮಂದಿಗೆ ಕೊರೋನ ಸೋಂಕು
ಮಂಗಳೂರು, ಅ. 24: ದ.ಕ. ಜಿಲ್ಲೆಯಲ್ಲಿ ಹೊಸದಾಗಿ 34 ಮಂದಿಗೆ ಕೊರೋನ ಸೋಂಕು ತಗುಲಿದ್ದು, ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ.
ಜಿಲ್ಲೆಯಲ್ಲಿ 30 ಮಂದಿ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇ.041 ದಾಖಲಾಗಿದೆ. 1,15,286 ಸೋಂಕಿತರ ಪೈಕಿ 1,13,322 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್ನಿಂದಾಗಿ 1678 ಮಂದಿ ಮೃತಪಟ್ಟಿದ್ದಾರೆ. 286 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ 88,385 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 1,07,31,470 ರೂ. ದಂಡ ವಸೂಲಿ ಮಾಡಲಾಗಿದೆ.
Next Story