ಪ.ಜಾತಿ ಮತ್ತು ಪ.ಪಂಗಡದ ಉದ್ಯಮಿಗಳಿಗೆ ಶೇ.4ರಷ್ಟು ಬಡ್ಡಿ ಸಹಾಯಧನ
ಉಡುಪಿ, ಅ.29: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ ಹಾಲಿ ಜಾರಿಯಲ್ಲಿರುವ ಶೇ.4ರಷ್ಟು ಬಡ್ಡಿ ಸಹಾಯಧನ ಯೋಜನೆಯನ್ನು ವಾಣಿಜ್ಯ ಮತ್ತು ವ್ಯಾಪಾರ ಚಟುವಟಿಕೆಗಳಾದ ಮಳಿಗೆ/ಡೀಲರ್‌ಶಿಪ್/ ಪ್ರಾಂಚೈಸಿ ಮತ್ತು ಹೋಟೆಲ್ ಉದ್ಯಮಗಳನ್ನು ಪ್ರಾರಂಭಿಸಲು ಸಹ ವಿಸ್ತರಿಸಿ, ಈ ಯೋಜನೆಯಡಿ ಗರಿಷ್ಟ ಒಂದು ಕೋಟಿ ರೂ.ವರೆಗೆ ಶೆಡ್ಯೂಲ್ಡ್ ಬ್ಯಾಂಕ್ ಗಳಿಂದ ಸಾಲ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಪ.ಜಾತಿ ಮತ್ತು ಪ.ಪಂಗಡದ ಆಸಕ್ತ ಉದ್ಯಮಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಹಾಯಕ ನಿರ್ದೇಶಕರು,ಸಮಾಜ ಕಲ್ಯಾಣ ಇಲಾಖೆ ಉಡುಪಿ (0820-2528884), ಕುಂದಾಪುರ (08254-298089/230609), ಕಾರ್ಕಳ(08258-232133/298134) ಇವರ ಕಚೇರಿಯನ್ನು ಸಂಪರ್ಕಿಸಿ ಕಚೇರಿಗಳಲ್ಲಿ ಅರ್ಜಿಯನ್ನು ಪಡೆದುಕೊಳ್ಳಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story