ಪ್ರಸವಪೂರ್ವ ಲಿಂಗ ಪತ್ತೆ ಕಾಯಿದೆ ಸಲಹಾ ಸಮಿತಿ ಸಭೆ
ಉಡುಪಿ, ನ.7: ಜಿಲ್ಲಾ ಮಟ್ಟದ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಕಾಯಿದೆ ಸಲಹಾ ಸಮಿತಿ ಸಭೆಯು ಪ್ರಸೂತಿ ತಜ್ಞ ಡಾ.ಪ್ರತಾಪ್ ಕುಮಾರ್ ಅಧ್ಯಕ್ಷತೆಯಲ್ಲಿ ನ.6ರಂದು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಡಿಎಚ್ಓ ಡಾ.ನಾಗಭೂಷಣ ಉಡುಪ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀರಾಮ ರಾವ್, ಮಕ್ಕಳ ತಜ್ಞ ಡಾ.ಕಿರಣ ಹೆಬ್ಬಾರ್, ಮೆಡಿಕಲ್ ಜೆನಿಟಿಸ್ಟ್ ಡಾ.ಗಿರೀಶ, ಸಮಾಜ ಸೇವಕಿ ಸರಿತಾ ಸಂತೋಷ, ಡಾ.ಗಣೇಶ್ ಪೈ, ಪ್ರಸೂತಿ ತಜ್ಞೆ ಡಾ.ದೀಕ್ಷಿತಾ ಮತ್ತಿತ್ತರರು ಉಪಸ್ಥಿತರಿದ್ದರು.
Next Story