ಪಾಣೆಮಂಗಳೂರು ಸೇತುವೆಯಿಂದ ನದಿಗೆ ಹಾರಿದ ಮಹಿಳೆ
ಬಂಟ್ವಾಳ, ನ.20: ಪಾಣೆಮಂಗಳೂರು ನೇತ್ರಾವತಿ ಸೇತುವೆಯಿಂದ ಮಹಿಳೆಯೊಬ್ಬರು ನದಿಗೆ ಹಾರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇಂದು ಬೆಳಗ್ಗೆ 10 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆಯಿಂದ ಮಹಿಳೆಯೊಬ್ಬರು ನದಿಗೆ ಹಾರಿದ್ದನ್ನು ವಾಹನ ಸವಾರರೊಬ್ಬರು ನೋಡಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ಸ್ಥಳೀಯ ಮುಳುಗುಗಾರರು ದೋಣಿಯ ಮೂಲಕ ನೇತ್ರಾವತಿ ಸೇತುವೆಯ ಬಳಿಗೆ ಬಂದರೂ ಅದಾಗಲೇ ಮಹಿಳೆ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಸ್ಥಳೀಯರು ನೀಡಿದ್ದಾರೆ.
ನದಿಗೆ ಹಾರಿದ ಮಹಿಳೆ ಯಾರು ಎಂಬ ಬಗ್ಗೆ ಇನ್ನೂ ಕೂಡ ಮಾಹಿತಿ ಲಭ್ಯವಾಗಿಲ್ಲ. ಘಟನೆ ನಡೆದ ಬಳಿಕ ಕೆಲವು ಸಮಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆಯಾಗಿತ್ತು. ಸ್ಥಳಕ್ಕೆ ಆಗಮಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಟ್ರಾಫಿಕ್ ಸುಲಭ ಸಂಚಾರಕ್ಕೆ ಅವಕಾಶ ಮಾಡಿಕೊಟಿದ್ದಾರೆ.
Next Story