ಬಾವಿಯಲ್ಲಿ ಮಹಿಳೆಯ ಮೃತದೇಹ ಪತ್ತೆ
ಹಿರಿಯಡ್ಕ, ನ.21: ಹಿರಿಯಡ್ಕ ಸಮೀಪದ ಪುತ್ತಿಗೆ ಎಂಬಲ್ಲಿ ಬಾವಿಯಲ್ಲಿ ಮಹಿಳೆಯೊಬ್ಬರ ಮೃತದೇಹ ನ.20ರಂದು ಬೆಳಗ್ಗೆ ಪತ್ತೆಯಾಗಿದೆ.
ಮೃತರನ್ನು ಪುತ್ತಿಗೆ ನಿವಾಸಿ ಅಶೋಕ ಜೋಗಿ ಎಂಬವರ ಪತ್ನಿ ಪ್ರಿಯ(42) ಎಂದು ಗುರುತಿಸಲಾಗಿದೆ. ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾದ ಇವರು, ಮನೆಯಿಂದ ನಾಪತ್ತೆಯಾಗಿದ್ದು, ಹುಡುಕಾಡಿದಾಗ ಇವರ ಮೃತದೇಹ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ.
ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Next Story