varthabharthi


ರಾಷ್ಟ್ರೀಯ

ನ್ಯೂಝಿಲ್ಯಾಂಡ್ ವಿರುದ್ಧ ಮೊದಲ ಟೆಸ್ಟ್ ನಿಂದ ಹೊರಗುಳಿದ ರಾಹುಲ್

ವಾರ್ತಾ ಭಾರತಿ : 23 Nov, 2021

ಹೊಸದಿಲ್ಲಿ: ಭಾರತದ ಆರಂಭಿಕ ಬ್ಯಾಟ್ಸ್ ಮನ್ ಕೆ.ಎಲ್. ರಾಹುಲ್ ಗಾಯದ ಸಮಸ್ಯೆಯ ಕಾರಣ ನ್ಯೂಝಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ ಎಂದು  ಬಿಸಿಸಿಐ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಈಗಾಗಲೇ ಮೊದಲ ಪಂದ್ಯದಿಂದ ಹೊರಗುಳಿದಿರುವುದರಿಂದ ರಾಹುಲ್ ಗಾಯಗೊಂಡಿರುವುದು ಭಾರತಕ್ಕೆ ತೀವ್ರ ಹಿನ್ನಡೆಯಾಗಿದೆ ಎನ್ನಲಾಗಿದೆ.

ಭಾರತ ಹಾಗೂ ನ್ಯೂಝಿಲ್ಯಾಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯವು ನವೆಂಬರ್ 25 ರಂದು ಕಾನ್ಪುರದಲ್ಲಿ ಆರಂಭವಾಗಲಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)