varthabharthi


ನಿಧನ

ನಾರಾಯಣ ಪೂಜಾರಿ

ವಾರ್ತಾ ಭಾರತಿ : 23 Nov, 2021

ಗುರುಪುರ, ನ.23: ಹಿರಿಯ ಕಾಂಗ್ರೆಸಿಗ, ಸಹಕಾರಿ ಧುರೀಣ ಗಂಜಿಮಠ ನಾರಾಯಣ ಪೂಜಾರಿ (81) ಸೋಮವಾರ ರಾತ್ರಿ ನಿಧನ ಹೊಂದಿದರು,

ಮೃತರು ಪತ್ನಿ ಮತ್ತು ಕಾಂಗ್ರೆಸ್ ನಾಯಕ ಗಣೇಶ್ ಪೂಜಾರಿ ಸಹಿತ 4 ಗಂಡು ಹಾಗೂ 2 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ನಾರಾಯಣ ಪೂಜಾರಿ ಗಂಜಿಮಠ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಸುಮಾರು 18 ವರ್ಷಗಳ ಕಾಲ ಮತ್ತು ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಸುಮಾರು 30 ವರ್ಷಗಳ ಕಾಲ ಹಾಗೂ ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾಗಿ ಸುಮಾರು 15 ವರ್ಷ ಸೇವೆ ಸಲ್ಲಿಸಿದ್ದಾರೆ. ಮೂರ್ತೆದಾರರ ಮಹಾಮಂಡಲದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)