ದ.ಕ.ಜಿಲ್ಲೆ: 14 ಮಂದಿಗೆ ಕೋವಿಡ್ ಪಾಸಿಟಿವ್
ಮಂಗಳೂರು, ನ.24: ದ.ಕ. ಜಿಲ್ಲೆಯಲ್ಲಿ ಬುಧವಾರ 14 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, 10 ಮಂದಿ ಗುಣಮುಖರಾಗಿ ದ್ದಾರೆ. ಪಾಸಿಟಿವ್ ದರ ಶೇ.0.34 ದಾಖಲಾಗಿದೆ.
ಜಿಲ್ಲೆಯಲ್ಲಿ ಈವರೆಗೆ 22,17,8383 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 21,02,051 ನೆಗೆಟವ್ ಮತ್ತು 1,15,787 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು 1,13,979 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 1693 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಸದ್ಯ 115 ಸಕ್ರಿಯ ಪ್ರಕರಣವಿದೆ.
ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 88,852 ಪ್ರಕರಣ ದಾಖಲಿಸಿ 1,07,78,070 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story