ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಬೆಂಗಳೂರು, ನ.29: ರಾಜ್ಯದ 2021-22ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿ.31ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ ಅಥವಾ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2021-22 ನೇ ಸಾಲಿಗೆ ಹಿಂದುಳಿದ ವರ್ಷಗಳ ಕಲ್ಯಾಣ ಇಲಾಖೆಯಿಂದ ನೀಡುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ನ.30ಕ್ಕೆ ಕೊನೆಯ ದಿನಾಂಕವನ್ನು ನಿಗದಿ ಪಡಿಸಿತ್ತು.
ವಿದ್ಯಾರ್ಥಿಗಳ ಮತ್ತು ಶೈಕ್ಷಣಿಕ ಸಂಸ್ಥೆಗಳ ಮನವಿ ಮೇರೆಗೆ ಡಿ.31ರವರೆಗೆ ವಿಸ್ತರಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.
Next Story