ದ.ಕ. ಜಿಲ್ಲೆಯಲ್ಲಿ 13 ಮಂದಿಗೆ ಕೋವಿಡ್ ಪಾಸಿಟಿವ್
ಮಂಗಳೂರು, ಡಿ.5: ದ.ಕ.ಜಿಲ್ಲೆಯಲ್ಲಿ ರವಿವಾರ 13 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. 15 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಪಾಸಿಟಿವ್ ದರ ಶೇ.0.18 ದಾಖಲಾಗಿದೆ.
ಜಿಲ್ಲೆಯಲ್ಲಿ ಈವರೆಗೆ 22,81,850 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 21,65,891 ನೆಗೆಟವ್ ಮತ್ತು 1,15,959 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು 1,14,117 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 1,695 ಮಂದಿ ಈವರೆಗೆ ಕೋವಿಡ್ಗೆ ಬಲಿಯಾಗಿದ್ದಾರೆ. ಸದ್ಯ 147 ಸಕ್ರಿಯ ಪ್ರಕರಣವಿದೆ.
ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 89,079 ಪ್ರಕರಣ ದಾಖಲಿಸಿ, 1,08,00,770 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story