ದ.ಕ.ಜಿಲ್ಲೆಯಲ್ಲಿ ಶುಕ್ರವಾರ 26 ಮಂದಿಗೆ ಕೋವಿಡ್ ಸೋಂಕು ದೃಢ
ಮಂಗಳೂರು, ಡಿ.10: ದ.ಕ.ಜಿಲ್ಲೆಯಲ್ಲಿ ಶುಕ್ರವಾರ 26 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. 12 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಪಾಸಿಟಿವ್ ದರ ಶೇ.0.35 ದಾಖಲಾಗಿದೆ.
ಜಿಲ್ಲೆಯಲ್ಲಿ ಈವರೆಗೆ 23,14,272 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 21,98,245 ನೆಗೆಟವ್ ಮತ್ತು 1,16,027 ಪಾಸಿಟಿವ್ ಪ್ರಕರಣ ದಾಖಲಾಗಿದೆ.
ಸೋಂಕಿತರ ಪೈಕಿ ಒಟ್ಟು 1,14,188 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 1,698 ಮಂದಿ ಈವರೆಗೆ ಕೋವಿಡ್ಗೆ ಬಲಿಯಾಗಿದ್ದಾರೆ. ಸದ್ಯ 141 ಸಕ್ರಿಯ ಪ್ರಕರಣವಿದೆ.
ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 90,160 ಪ್ರಕರಣ ದಾಖಲಿಸಿ, 1,09,09,970 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story