ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
ಮಣಿಪಾಲ, ಡಿ.23: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಉಡುಪಿ ಎಂಜಿಎಂ ಸಮೀಪದ ನಿವಾಸಿ ಹರ್ಷ(37) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಡಿ.23ರಂದು ಮುಂಜಾನೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಪು: ಮದುವೆ ಆಗದ ವಿಚಾರದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಡಿ.16ರಂದು ಮದ್ಯದಲ್ಲಿ ಇಲಿ ಪಾಷಾಣ ಸೇರಿಸಿ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ಎಂಬವರು ಡಿ.22ರಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಜಿಲ್ಲಾ ಸರಕಾರಿ ಅಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story