ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಕೆಪಿಸಿಸಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತದಾನ
ಬೆಂಗಳೂರು: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಕೆಪಿಸಿಸಿ ಕಚೇರಿಗೆ ಆಗಮಿಸಿ ಮತದಾನ ಮಾಡಿದರು.
ಮತದಾನಕ್ಕೆ ಆಗಮಿಸಿದ ಖರ್ಗೆ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ವಾಗತಿಸಿದರು.
ಬಳಿಕ ಕೆಪಿಸಿಸಿ ಕಚೇರಿಗೆ ಆಗಮಿಸಿದ ಮತದಾನ ಮಾಡಿದರು. ಜೊತೆಗೆ ವಿಪಕ್ಷ ಉಪನಾಯಕ ಯು.ಟಿ ಖಾದರ್ ಕೂಡ ಮತ ಚಲಾಯಿಸಿದರು.
ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಬಳ್ಳಾರಿಯಲ್ಲಿ ಮತ ಚಲಾಯಿಸಿದ ರಾಹುಲ್ ಗಾಂಧಿ
ಅ.19ಕ್ಕೆ ಫಲಿತಾಂಶ: ನಾಳೆ ಮತದಾನ ನಡೆಯಲಿದ್ದು, ಅ.19ಕ್ಕೆ ಮತ ಎಣಿಕೆ ನಡೆಯಲಿದ್ದು ಅಂದೇ ಫಲಿತಾಂಶ ಪ್ರಕಟಿಸುವ ಸಾಧ್ಯತೆಗಳಿವೆ. 22 ವರ್ಷಗಳ ಬಳಿಕ ಚುನಾವಣೆ ನಡೆಯುತ್ತಿದ್ದು, ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ನಡುವೆ ಪೈಪೋಟಿ ಏರ್ಪಟ್ಟಿದೆ. ರಾಜ್ಯದಲ್ಲಿನ ಬಹುತೇಕ ಕಾಂಗ್ರೆಸ್ ಪ್ರತಿನಿಧಿಗಳ ಒಲವು ಮಲ್ಲಿಕಾರ್ಜುನ ಖರ್ಗೆ ಪರವಾಗಿದ್ದು, ಅವರ ಗೆಲವು ನಿಶ್ಚಿತವಾಗಿದೆ ಎಂದು ಹೇಳಲಾಗುತ್ತಿದೆ.
Next Story