varthabharthi


ನಿಧನ

ಡಾ. ಪ್ರಭಾಕರ ಶೆಟ್ಟಿ

ವಾರ್ತಾ ಭಾರತಿ : 15 Jan, 2022

ಕಾಪು: ವೈದ್ಯಕೀಯ, ಶೈಕ್ಷಣಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದ ಕಾಪುವಿನ ಪ್ರಸಿದ್ಧ ವೈದ್ಯರಾದ ಡಾ. ಪ್ರಭಾಕರ ಶೆಟ್ಟಿ (81) ಶನಿವಾರ ಹೃದಯಾಘಾತದಿಂದ ನಿಧನ ಹೊಂದಿದರು. 

55 ವರ್ಷಗಳಿಂದ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಕೊಪ್ಪಲಂಗಡಿ ಪ್ರಶಾಂತ್ ಆಸ್ಪತ್ರೆಯ ಸಂಸ್ಥಾಪಕರಾಗಿದ್ದು, ದಂಡತೀರ್ಥ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾಗಿ, ಕಾಪು ಲಕ್ಷ್ಮೀ ಜನಾರ್ಧನ ದೇವಸ್ಥಾನ, ವಾಸುದೇವಸ್ವಾಮಿ ದೇವಸ್ಥಾನ ಕೊಪ್ಪಲಂಗಡಿ ಹಾಗೂ ಮೂರನೇ ಮಾರಿಗುಡಿಯ ಆಡಳಿತ ಮೊಕ್ತೇಸರರಾಗಿ ಸೇವೆ ಸಲ್ಲಿಸಿದದದರು. ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಹಿತ ವಿವಿಧ ಪ್ರಶಸ್ತಿಗಳನ್ನು ಇವರು ಪಡೆದಿದ್ದರು. 

ಮೃತರು ಪತ್ನಿ, ಓರ್ವ ಮಗ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. 

ಇವರ ನಿಧನಕ್ಕೆ ಶಾಸಕ ಲಾಲಾಜಿ ಮೆಂಡನ್, ಮಾಜಿ ಸಚಿವ ವಿನಯಕುಮಾರ್ ಸೊರಕೆ ಸಹಿತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)