varthabharthi


ಕ್ರೀಡೆ

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಟ್ಟಿ: 5ನೇ ಸ್ಥಾನಕ್ಕೆ ಕುಸಿದ ಭಾರತ

ವಾರ್ತಾ ಭಾರತಿ : 15 Jan, 2022

ಹೊಸದಿಲ್ಲಿ, ಜ.15: ದಕ್ಷಿಣ ಆಫ್ರಿಕಾ ವಿರುದ್ಧ ಕೇಪ್‌ಟೌನ್‌ನಲ್ಲಿ ಶುಕ್ರವಾರ ಕೊನೆಗೊಂಡ ಸರಣಿ ನಿರ್ಣಾಯಕ ಮೂರನೇ ಟೆಸ್ಟ್ ಪಂದ್ಯದಲ್ಲಿ 7 ವಿಕೆಟ್‌ಗಳ ಅಂತರದಿಂದ ಸೋತಿರುವ ಭಾರತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಟ್ಟಿಯಲ್ಲಿ ಅಗ್ರ-4 ಸ್ಥಾನದಿಂದ ಹೊರಗುಳಿದಿದೆ. ವಿರಾಟ್ ಕೊಹ್ಲಿ ಬಳಗ ಇದೀಗ ಐದನೇ ಸ್ಥಾನಕ್ಕೆ ಕುಸಿದಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಮೊದಲ ಆವೃತ್ತಿಯಲ್ಲಿ ರನ್ನರ್ಸ್ ಅಪ್ ಆಗಿದ್ದ ಭಾರತ 49.07 ಪಿಸಿಟಿ ಪಡೆಯುವ ಮೂಲಕ ಪ್ರಸ್ತುತ ಐದನೇ ಸ್ಥಾನದಲ್ಲಿದೆ.

2ನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವು ಈ ತನಕ 9 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಈ ಪೈಕಿ 4ರಲ್ಲಿ ಜಯ, ಮೂರರಲ್ಲಿ ಸೋಲು ಹಾಗೂ ಎರಡು ಬಾರಿ ಡ್ರಾ ಸಾಧಿಸಿದೆ. ಭಾರತವು 53 ಪಾಯಿಂಟ್ಸ್ ಗಳಿಸಿದ್ದು, ಇದು ಎಲ್ಲ ತಂಡಗಳ ಪೈಕಿ ಗರಿಷ್ಠವಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)