ಉಡುಪಿ
ಬಾವಿಗೆ ಬಿದ್ದು ವೃದ್ಧೆ ಮೃತ್ಯು
ವಾರ್ತಾ ಭಾರತಿ : 17 Jan, 2022
ಹೆಬ್ರಿ, ಜ.17: ಅಕಸ್ಮಿಕವಾಗಿ ಬಾವಿಗೆ ಬಿದ್ದು ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಜ.17ರಂದು ಬೆಳಗ್ಗೆ ನಡೆದಿದೆ.
ಮೃತರನ್ನು ಕಮಲಾ ಪೂಜಾರ್ತಿ(90) ಎಂದು ಗುರುತಿಸಲಾಗಿದೆ. ಇವರು ತನ್ನ ಮಗನ ಮನೆಯಿಂದ ನಡೆದುಕೊಂಡು ಹೋಗುತ್ತಿ ದ್ದಾಗ ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)