ಕೋಡಿ ಬ್ಯಾರೀಸ್‍ನಲ್ಲಿ ಯಕ್ಷಗಾನದ ಮೂಲಕ ಕೊರೋನ ಜಾಗೃತಿ
ಕೋಡಿ: ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇದರ ಸಹಯೋಗದಲ್ಲಿ ಶ್ರೀದುರ್ಗಾಪರಮೇಶ್ವರಿ ಯಕ್ಷಕಲಾ ಟ್ರಸ್ಟ್ ಉಪ್ಪುಂದ ಇವರಿಂದ ಯಕ್ಷಗಾನದ ಮೂಲಕ ಕೊರೋನ ಜಾಗೃತಿ ಕಾರ್ಯಕ್ರಮ ಕೋಡಿ ಬ್ಯಾರೀಸ್ ಸೀಸೈಡ್ ಪಬ್ಲಿಕ್ ಸ್ಕೂಲ್‍ನ ಸಭಾಂಗಣದಲ್ಲಿ ನೆರವೇರಿತು.
ಕಾರ್ಯಕ್ರಮದಲ್ಲಿ ಕೋಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಉಮೇಶ್ ನಾಯಕ್, ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗ, ಬೋಧಕ ಹಾಗೂ ಬೋಧಕೇತರ ವೃಂದ ಹಾಗೂ ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Next Story