ದಕ್ಷಿಣ ಕನ್ನಡ
ಮಂಗಳೂರು; 20 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ವಾರ್ತಾ ಭಾರತಿ : 18 Jan, 2022

ಮಂಗಳೂರು, ಜ.18: ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ 20 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಕಾರ್ಕಳದ ಬಜಗೋಳಿಯ ದಿಡಿಂಬಿಲ ಗುಡ್ಡದ ಝಕರಿಯಾ ಎಂಬಾತನನ್ನು ಮಂಗಳವಾರ ಬಂದರು ಪೊಲೀಸರು ಬಂಧಿಸಿದ್ದಾರೆ.
2000ರಲ್ಲಿ ಈತನ ವಿರುದ್ಧ ಬಂದರು ಪೊಲೀಸರು ಪ್ರಕರಣ ದಾಖಲಿಸಿದ್ದರು. ಆ ಬಳಿಕ ಪೊಲೀಸರಿಗೆ ಸಿಗದೆ ಆರೋಪಿ ತಲೆಮರೆಸಿಕೊಂಡಿದ್ದ. ಆರೋಪಿಯ ಇರುವಿಕೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮಂಗಳವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)