ಕ್ರೀಡಾ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
ಉಡುಪಿ, ಜ.19:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನ ಕ್ರೀಡಾ ಪ್ರೋತ್ಸಾಹ ಧನಕ್ಕೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಕೂಟದ ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಯಲ್ಲಿ ಭಾಗವಹಿಸಿ ಪದಕ ಪಡೆದ ಕ್ರೀಡಾಪಟುಗಳಿಗೆ ಸಹಾಯಧನ ನೀಡಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡು, ಉಡುಪಿ ದೂ.ಸಂಖ್ಯೆ: 0820-2521324, ಮೊ.ನಂ: 9480886467 ಅನ್ನು ಸಂಪರ್ಕಿಸು ವಂತೆ ಪ್ರಕಟಣೆ ತಿಳಿಸಿದೆ.
Next Story