ದಕ್ಷಿಣ ಕನ್ನಡ
ಉಪ್ಪಿನಂಗಡಿ; ಅಡಿಕೆ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ
ವಾರ್ತಾ ಭಾರತಿ : 19 Jan, 2022
ಉಪ್ಪಿನಂಗಡಿ: ಅಡಿಕೆ ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರಿನ ಚಿಕ್ಕಮುಡ್ನೂರು ಗ್ರಾಮದ ಬಡಾವು ಮನೆ ನಿವಾಸಿ ವಿನಯ ಕುಮಾರ್ (31) ಹಾಗೂ ಕೆಮ್ಮಾಯಿ ಜಂಕ್ಷನ್ ನಿವಾಸಿ ಜುನೈದ್ (24) ಬಂಧಿತ ಆರೋಪಿಗಳು.
ಬಿಳಿಯೂರು ಗ್ರಾಮದ ವಸಂತ ದೇವಾಡಿಗರ ಮನೆಯ ಅಂಗಳದಲ್ಲಿ ಒಣಗಲು ಹಾಕಿದ ಅಡಿಕೆ ಜ.11ರಂದು ರಾತ್ರಿ ಕಳ್ಳತನವಾಗಿದ್ದು, ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಜ.18ರಂದು 34 ನೆಕ್ಕಿಲಾಡಿ ಜಂಕ್ಷನ್ ಬಳಿ ರಿಕ್ಷಾದಲ್ಲಿದ್ದ ಆರೋಪಿಗಳನ್ನು ಬಂಧಿಸಿ, ಅಟೋ ರಿಕ್ಷಾ ಹಾಗೂ ಕಳವು ಮಾಡಿದ ಅಡಿಕೆಯನ್ನು ಸ್ವಾಧೀನಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)