ಕರ್ನಾಟಕ
ಗದಗ: ಲಂಚ ಪಡೆಯುತ್ತಿದ್ದ ಆರೋಪ; ಬಿಜೆಪಿ ಮುಖಂಡ ಎಸಿಬಿ ಬಲೆಗೆ

ಗದಗ: ಸರಕಾರಿ ಆಸ್ಪತ್ರೆಯಲ್ಲಿ ನರ್ಸಿಂಗ್ ಹುದ್ದೆ ಕೊಡಿಸುತ್ತೇನೆಂದು ಮಹಿಳೆಯೊಬ್ಬರಿಂದ ಹಣ ಪಡೆಯುತ್ತಿದ್ದ ವೇಳೆ ಜಿಲ್ಲಾ ಬಿಜೆಪಿ ಯುವ ಮುಖಂಡನನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬಿಜೆಪಿಯ ಯುವ ಮುಖಂಡ ರಮೇಶ್ ಸಜ್ಜಗಾರ ಎಂದು ತಿಳಿದು ಬಂದಿದೆ. ಎಸಿಬಿ ತಂಡ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಡಂಬಳ ಅಥವಾ ಮುಂಡರಗಿ ಸರಕಾರಿ ಆಸ್ಪತ್ರೆಯಲ್ಲಿ ನರ್ಸಿಂಗ್ ಹುದ್ದೆ ಕೊಡಿಸುತ್ತೇನೆಂದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳದ ಈರಯ್ಯ ಎಂಬವರ ಪತ್ನಿಗೆ ಒಂದು ಲಕ್ಷ ರೂ. ಬೇಡಿಕೆ ಇಟ್ಟಿದ್ದು. ಹೊಟೇಲ್ ನಲ್ಲಿ 90 ಸಾವಿರ ರೂ. ಪಡೆದುಕೊಳ್ಳುತ್ತಿದ್ದಾಗ ಎಸಿಬಿ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.
ಕಾರ್ಯಾಚರಣೆಯನ್ನು ಭ್ರಷ್ಟಾಚಾರ ನಿಗ್ರಹ ದಳದ ಎಸ್ಪಿ ಬಿ ಎಸ್ ನ್ಯಾಮಗೌಡ ಮಾರ್ಗದರ್ಶನದಲ್ಲಿ ಡಿವೈಎಸ್ಪಿಗಳಾದ ಎಮ್ ವಿ ಮಲ್ಲಾಪೂರ, ಸುರೇಶ್ ರೆಡ್ಡಿ ಅವರ ನೇತೃತ್ವದಲ್ಲಿ ಗದಗ ಎಸಿಬಿ ಇನ್ ಸ್ಪೆಕ್ಟರ್ ಗಳಾದ ಆರ್ ಎಫ್ ದೇಸಾಯಿ, ವೀರಣ್ಣ ಹಳ್ಳಿ, ಸಿಬ್ಬಂದಿಗಳಾದ ಎಮ್ ಎಮ್ ಅಯ್ಯನ ಗೌಡ್ರ, ವೀರೇಶ್ ಜೋಳದ, ನಾರಾಯಣ ತಾಯಣ್ಣವರ್, ವೀರಣ್ಣ ಜಾಲಿಹಾಳ, ಶರೀಫ್ ಮುಲ್ಲಾ, ಮಂಜುನಾಥ್ ಮುಳಗುಂದ, ವೀರೇಶ್ ಬಿಸನಳ್ಳಿ, ನಾರಾಯಣರೆಡ್ಡಿ ಇದ್ದರೂ ಎಂದು ತಿಳಿದು ಬಂದಿದೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಇನ್ನಷ್ಟು ಕರ್ನಾಟಕ ಸುದ್ದಿಗಳು
ಟಾಪ್ ಸುದ್ದಿಗಳು
ಕರ್ನಾಟಕ

ಉಡುಪಿ
