ಕರ್ನಾಟಕ
ಕೈದಿಗಳ ಅಸ್ವಾಭಾವಿಕ ಸಾವು: ಪರಿಹಾರದ ವರದಿ ಕೇಳಿದ ಹೈಕೋರ್ಟ್
ವಾರ್ತಾ ಭಾರತಿ : 20 Jan, 2022

ಬೆಂಗಳೂರು, ಜ.20: ರಾಜ್ಯದ ಜೈಲುಗಳಲ್ಲಿ ಅಸ್ವಾಭಾವಿಕವಾಗಿ ಸಾವನ್ನಪ್ಪಿದ ವಿಚಾರಣಾಧೀನ ಕೈದಿಗಳ ಅವಲಂಬಿತರಿಗೆ ಪರಿಹಾರ ನೀಡಿರುವ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.
ಪರಿಹಾರ ನೀಡುವ ಸಂಬಂಧ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಪಿಐಎಲ್ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರುತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ವಕೀಲರ ವಾದ ಆಲಿಸಿದ ನ್ಯಾಯಪೀಠ, ಜೈಲುಗಳಲ್ಲಿ ಅಸ್ವಾಭಾವಿಕವಾಗಿ ಸಾವನ್ನಪ್ಪಿದ ವಿಚಾರಣಾಧೀನ ಕೈದಿಗಳ ಅವಲಂಬಿತರಿಗೆ ಪರಿಹಾರ ನೀಡಿರುವ ಬಗ್ಗೆ ಸಮಗ್ರ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ನಿರ್ದೇಶಿಸಿ, ವಿಚಾರಣೆಯನ್ನು ಮುಂದೂಡಿತು.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)
ಇನ್ನಷ್ಟು ಕರ್ನಾಟಕ ಸುದ್ದಿಗಳು
ಟಾಪ್ ಸುದ್ದಿಗಳು
ಕರ್ನಾಟಕ

ವಿಜಯಪುರ: ಕೂಲಿ ಕೆಲಸ ಮಾಡಿ ಮಕ್ಕಳನ್ನು ಸಾಕುತ್ತಿರುವ ದಲಿತ ಮಹಿಳೆಯ ಪುತ್ರ ಎಸೆಸೆಲ್ಸಿಯಲ್ಲಿ ರಾಜ್ಯಕ್ಕೆ ಟಾಪರ್
ಉಡುಪಿ

ಸಿಆರ್ಝಡ್ ವ್ಯಾಪ್ತಿಯ ನದಿಗಳ ಸಂಗ್ರಹಿತ ಮರಳನ್ನು ಮಾರಾಟ ಮಾಡುವಂತಿಲ್ಲ: ಚೆನ್ನೈನ ಹಸಿರು ಪೀಠದಿಂದ ಮಹತ್ವದ ತೀರ್ಪು