ಅಂತಾರಾಷ್ಟ್ರೀಯ
ಲೈಬೀರಿಯಾ: ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತ; 29 ಮಂದಿ ಮೃತ್ಯು

ಸಾಂದರ್ಭಿಕ ಚಿತ್ರ
ಮೊನ್ರೋವಿಯಾ, ಜ.20: ಲೈಬೀರಿಯಾದ ರಾಜಧಾನಿ ಮೊನ್ರೋವಿಯಾದ ಬಳಿಯ ಉಪನಗರದಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಸಂಭವಿಸಿದ ನೂಕುನುಗ್ಗಲಿನಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಕನಿಷ್ಟ 29 ಮಂದಿ ಮೃತಪಟ್ಟಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ನ್ಯೂ ಕ್ರು ನಗರದ ಫುಟ್‌ಬಾಲ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಹಠಾತ್ ನೂಕುನುಗ್ಗಲು ಸಂಭವಿಸಿದೆ. ಜನತೆ ದಿಕ್ಕಾಪಾಲಾಗಿ ಓಡಿದಾಗ ಕನಿಷ್ಟ 29 ಮಂದಿ ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಮೃತರ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ . ನೂಕುನುಗ್ಗಲಿಗೆ ಕಾರಣ ಸ್ಪಷ್ಟವಾಗಿಲ್ಲ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.
ಇದು ದೇಶದ ಇತಿಹಾಸದಲ್ಲಿ ಅತ್ಯಂತ ದುಖದ ದಿನವಾಗಿದೆ. ಕ್ರಿಶ್ಚಿಯನ್ನರ ಪ್ರಾರ್ಥನಾ ಸಮಾವೇಶದಲ್ಲಿ ನಡೆದ ನೂಕುನುಗ್ಗಲಿನಲ್ಲಿ ಕನಿಷ್ಟ 29 ಮಂದಿ ಮೃತಪಟ್ಟಿದ್ದು ಮೃತರಲ್ಲಿ ಮಕ್ಕಳೂ ಸೇರಿದ್ದಾರೆ. ಮೃತರ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಯಿದೆ. ಹಲವಾರು ಮಂದಿ ಗಾಯಗೊಂಡಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ಮಾಹಿತಿ ಇಲಾಖೆಯ ಸಹಾಯಕ ಸಚಿವ ಜಲಾವ ಟೋನ್ಪೋ ಹೇಳಿದ್ದಾರೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ