varthabharthi


ರಾಷ್ಟ್ರೀಯ

ಬಿಜೆಪಿಗೆ ಸೇರಿದ ನಂತರ ಮುಲಾಯಂ ಸಿಂಗ್ ಆಶೀರ್ವಾದ ಪಡೆದ ಅಪರ್ಣಾ ಯಾದವ್

ವಾರ್ತಾ ಭಾರತಿ : 21 Jan, 2022

photo: twitter.com/aparnabisht7

ಹೊಸದಿಲ್ಲಿ: ಉತ್ತರಪ್ರದೇಶ ಚುನಾವಣೆಗೆ ವಾರಗಳ ಮೊದಲು ಬಿಜೆಪಿಗೆ ಸೇರ್ಪಡೆಗೊಂಡಿರುವ ಅಖಿಲೇಶ್ ಯಾದವ್ ಅವರ ಸಂಬಂಧಿ ಅಪರ್ಣಾ ಯಾದವ್ ಅವರು ಇಂದು ಲಕ್ನೋದಲ್ಲಿ ಸಮಾಜವಾದಿ ಪಕ್ಷದ ಸಂಸ್ಥಾಪಕ ಹಾಗೂ  ಅವರ ಮಾವ ಮುಲಾಯಂ ಸಿಂಗ್ ಯಾದವ್ ಅವರನ್ನು ಭೇಟಿಯಾದ ಫೋಟೋವನ್ನು ಟ್ವೀಟ್ ಮಾಡಿದ್ದಾರೆ.

"ಭಾರತೀಯ ಜನತಾ ಪಕ್ಷದ ಸದಸ್ಯತ್ವವನ್ನು ತೆಗೆದುಕೊಂಡ ನಂತರ ಲಕ್ನೋದಲ್ಲಿ ನನ್ನ ತಂದೆ/ನೇತಾಜಿಯವರ ಆಶೀರ್ವಾದವನ್ನು ಪಡೆದುಕೊಂಡಿದ್ದೇನೆ" ಎಂದು ಅಪರ್ಣಾ ಯಾದವ್ ಟ್ವೀಟ್ ಮಾಡಿದ್ದಾರೆ.

 "ಇದರರ್ಥ ನೇತಾಜಿ (ಮುಲಾಯಂ ಸಿಂಗ್ ಯಾದವ್) ಕೂಡ ಬಿಜೆಪಿ ಗೆಲ್ಲಬೇಕೆಂದು ಬಯಸುತ್ತಾರೆ’’ ಎಂದು ಬಿಜೆಪಿ ಬೆಂಬಲಿಗರೊಬ್ಬರು ಫೋಟೋಗೆ ಪ್ರತ್ಯುತ್ತರವಾಗಿ ಟ್ವೀಟ್ ಮಾಡಿದ್ದಾರೆ.

ಅಪರ್ಣಾ ಯಾದವ್ ಅವರು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಮಲ ಸಹೋದರ ಪ್ರತೀಕ್ ಯಾದವ್ ಅವರನ್ನು ವಿವಾಹವಾಗಿದ್ದಾರೆ. ಪ್ರತೀಕ್  ಅವರು ಮುಲಾಯಂ ಸಿಂಗ್ ಯಾದವ್ ಅವರ ಎರಡನೇ ಪತ್ನಿಯ ಮಗನಾಗಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)