ರಾಷ್ಟ್ರೀಯ
ಉತ್ತರಪ್ರದೇಶ ಚುನಾವಣೆ: ಕಾಂಗ್ರೆಸ್ ಸಿಎಂ ಅಭ್ಯರ್ಥಿ ಕುರಿತು ಪ್ರಿಯಾಂಕಾ ಗಾಂಧಿ ಹೇಳಿದ್ದೇನು?

ಹೊಸದಿಲ್ಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮುಂದಿನ ತಿಂಗಳು ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತಾನೇ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಬಹುದು ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.
ಉತ್ತರಪ್ರದೇಶದ ಯುವಜನರಿಗೆ ಉದ್ಯೋಗ ಸೃಷ್ಟಿ ಯೋಜನೆಗಳನ್ನು ರೂಪಿಸುವ ಪ್ರಣಾಳಿಕೆಯನ್ನು ಇಂದು ಬಿಡುಗಡೆ ಮಾಡಿದ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಈ ಚುನಾವಣೆಗೆ ಕಾಂಗ್ರೆಸ್‌ನ ಮುಖ್ಯಮಂತ್ರಿ ಅಭ್ಯರ್ಥಿಯ ಕುರಿತು ಊಹಾಪೋಹಗಳ ಬಗ್ಗೆ ಕೇಳಲಾಯಿತು. ಬಿಜೆಪಿಯು ಯೋಗಿ ಆದಿತ್ಯನಾಥ್ ಹಾಗೂ ಸಮಾಜವಾದಿ ಪಕ್ಷವು ಅಖಿಲೇಶ್ ಯಾದವ್ ನೇತೃತ್ವದಲ್ಲಿ ಮುನ್ನಡೆಯುತ್ತಿದೆ.
"ಯುಪಿ ಕಾಂಗ್ರೆಸ್ ಪಕ್ಷದಲ್ಲಿ ನಿಮಗೆ ಬೇರೆ ಮುಖ ಕಾಣಿಸುತ್ತಿದೆಯೇ?
"ನೀವು ನನ್ನ ಮುಖವನ್ನು ನೋಡಬಹುದು, ಅಲ್ಲವೇ?" ಎಂದು ಪ್ರಿಯಾಂಕಾ ಹೇಳಿದ್ದಾರೆ.
ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮೊದಲ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಇನ್ನೂ ದೃಢಪಟ್ಟಿಲ್ಲ. ಆದರೆ ಅವರು ಮುಖ್ಯಮಂತ್ರಿಯಾಗಲು ಅಸೆಂಬ್ಲಿ ಸ್ಥಾನಕ್ಕೆ ಸ್ಪರ್ಧಿಸಬೇಕಾಗಿಲ್ಲ ಎಂಬುದು ಗಮನಿಸಬೇಕಾದ ಸಂಗತಿಯಾಗಿದೆ.
ಆದಿತ್ಯನಾಥ್ ಅಥವಾ ಅಖಿಲೇಶ್ ಯಾದವ್ ರಾಜ್ಯ ಚುನಾವಣೆಯಲ್ಲಿ ಸ್ಪರ್ಧಿಸದೇ ಇದ್ದರೂ ವಿಧಾನ ಪರಿಷತ್ ಸದಸ್ಯರಾಗುವ ಮೂಲಕ ಮುಖ್ಯಮಂತ್ರಿಯಾಗಿದ್ದರು. ಈ ಬಾರಿ ಆದಿತ್ಯನಾಥ್ ಗೋರಖ್‌ಪುರದಿಂದ ಹಾಗೂ ಯಾದವ್ ಕರ್ಹಾಲ್‌ನಿಂದ ಚುನಾವಣೆಗೆ ನಿಲ್ಲಲಿದ್ದಾರೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ