ಕರ್ನಾಟಕ
ಆರ್ ಟಿಇ ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಸಾಂದರ್ಭಿಕ ಚಿತ್ರ
ಬೆಂಗಳೂರು, ಜ.21: 2021-22ನೇ ಸಾಲಿನಲ್ಲಿ ಆರ್ ಟಿಇ ಶುಲ್ಕ ಮರುಪಾವತಿಗಾಗಿ ಖಾಸಗಿ ಶಾಲೆಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಫೆ.19ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆಯು ಸುತ್ತೋಲೆ ಹೊರಡಿಸಿದೆ.
ಪ್ರಸಕ್ತ ಶೈಕ್ಷಣಿಕ ಸಾಲಿಗೆ ಸಂಬಂಧಿಸಿದಂತೆ ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಹಕ್ಕು ಕಾಯ್ದೆ 2009 ಸೆಕ್ಷನ್ 12(1)(ಸಿ) ಅಡಿ ಪ್ರವೇಶ ಪಡೆದು ಖಾಸಗಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಉಚಿತವಾಗಿ ಶಿಕ್ಷಣ ಪಡೆಯುವರು ಅವರ ಶುಲ್ಕವನ್ನು ಸರಕಾರವು ಮರುಪಾವತಿ ಮಾಡುತ್ತಿದ್ದು, ಖಾಸಗಿ ಶಾಲಾ ಆಡಳಿತ ಮಂಡಳಿಯು ತಂತ್ರಾಂಶದ ಮೂಲಕ ವಿದ್ಯಾರ್ಥಿಗಳ ದಾಖಲೆಗಳನ್ನು ಒದಗಿಸಬೇಕು.
ಜಿಲ್ಲೆಗಳ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ಕುರಿತು ಕ್ರಮ ವಹಿಸುವಂತೆ ಸುತ್ತೋಲೆಯಲ್ಲಿ ಆದೇಶಿಸಲಾಗಿದೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ