ದ.ಕ. ಜಿಲ್ಲೆ; 897 ಮಂದಿಗೆ ಕೋವಿಡ್ ಪಾಸಿಟಿವ್: ಓರ್ವ ಬಲಿ
ಮಂಗಳೂರು, ಜ.21:ದ.ಕ.ಜಿಲ್ಲೆಯಲ್ಲಿ ಶುಕ್ರವಾರ 897 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಒಬ್ಬರು ಬಲಿಯಾಗಿದ್ದಾರೆ. 794 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 1,26,159 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು 1,18,543 ಮಂದಿ ಗುಣಮುಖ ರಾಗಿ ಬಿಡುಗಡೆಗೊಂಡಿದ್ದಾರೆ. 1,716 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಸದ್ಯ 5,900 ಸಕ್ರಿಯ ಪ್ರಕರಣವಿದೆ.
ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 93,910 ಪ್ರಕರಣ ದಾಖಲಿಸಿ, 1,13,62,630 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story