ರಾಷ್ಟ್ರೀಯ
ಉತ್ತರಾಖಂಡ ವಿಧಾನಸಭಾ ಚುನಾವಣೆ: ಕಾಂಗ್ರೆಸ್ಗೆ ಸೇರ್ಪಡೆಗೊಂಡ ಉಚ್ಚಾಟಿತ ಬಿಜೆಪಿ ಸಚಿವ ಹರಕ್ ಸಿಂಗ್ ರಾವತ್

ಹರಕ್ ಸಿಂಗ್ ರಾವತ್ ಕಾಂಗ್ರೆಸ್ ಸೇರ್ಪಡೆ(photo:PTI)
ಡೆಹ್ರಾಡೂನ್,ಜ.21: ಉಚ್ಚಾಟಿತ ಬಿಜೆಪಿ ನಾಯಕ ಹಾಗೂ ರಾಜ್ಯದ ಮಾಜಿ ಸಚಿವ ಹರಕ್ ಸಿಂಗ್ ರಾವತ್ ಅವರು ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಮುನ್ನ ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ರಾವತ್ರನ್ನು ರಾಜ್ಯ ಸಂಪುಟದಿಂದ ವಜಾ ಮಾಡಲಾಗಿತ್ತು ಮತ್ತು ಆರು ವರ್ಷಗಳ ಅವಧಿಗೆ ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿತ್ತು.
ಬುಧವಾರ ದಿಲ್ಲಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿದ್ದ ರಾವತ್,ತನ್ನ ಪ್ರಭಾವವನ್ನು ಬಳಿಸಿ ಕನಿಷ್ಠ 10 ಕಾಂಗ್ರೆಸ್ ಅಭ್ಯರ್ಥಿಗಳನ್ನು ಚುನಾವಣೆಯಲ್ಲಿ ಗೆಲ್ಲಿಸುವುದಾಗಿ ಭರವಸೆ ನೀಡಿದ್ದರು ಎಂದು ಸುದ್ದಿಸಂಸ್ಥೆಯು ವರದಿ ಮಾಡಿದೆ. ಆದಾಗ್ಯೂ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ಒಂದು ವರ್ಗ ಪಕ್ಷಕ್ಕೆ ರಾವತ್ ಅವರ ಮರುಸೇರ್ಪಡೆಯನ್ನು ತಾವು ವಿರೋಧಿಸುವುದಾಗಿ ಗುರುವಾರ ಹೇಳಿದ್ದರು.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ