varthabharthi


ಕರ್ನಾಟಕ

ರಾಜ್ಯ ಗೃಹ ಸಚಿವರ ಆಪ್ತ ಕಾರ್ಯದರ್ಶಿಯಾಗಿ ಜೆ.ಡಿ.ಮಧುಚಂದ್ರ ತೇಜಸ್ವಿ ನಿಯೋಜನೆ

ವಾರ್ತಾ ಭಾರತಿ : 21 Jan, 2022

ಬೆಂಗಳೂರು, ಜ.21: ಸರಕಾರದ ಅಪರ ಕಾರ್ಯದರ್ಶಿ, ಸಿ.ಆ.ಸು.ಇಲಾಖೆ(ಸೇವಾ ನಿಯಮಗಳು)ಯ ಜೆ.ಡಿ.ಮಧುಚಂದ್ರ ತೇಜಸ್ವಿ ಅವರು, ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಆಪ್ತ ಕಾರ್ಯದರ್ಶಿಗಳಾಗಿ ನಿಯೋಜನೆಗೊಂಡಿದ್ದಾರೆ.

ಗೃಹ ಸಚಿವರ ಆಪ್ತ ಕಾರ್ಯದರ್ಶಿ ಹುದ್ದೆಯೊಂದಿಗೆ ಅವರು ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸರಕಾರದ ಅಪರ ಕಾರ್ಯದರ್ಶಿ, ಸಿ.ಆ.ಸು.ಇಲಾಖೆ(ಸೇವಾ ನಿಯಮಗಳು), ಹುದ್ದೆಯ ಅಧಿಕ ಪ್ರಭಾರದಲ್ಲಿ ಮುಂದಿನ ಆದೇಶದವರೆಗೆ ಇರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿ ಟಿ.ಮಹಂತೇಶ್ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)