ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಪ್ರವೇಶಕ್ಕೆ ಅರ್ಜಿ ಆಹ್ವಾನ
ಉಡುಪಿ, ಜ.25: ಪ್ರಸಕ್ತ ಸಾಲಿನಲ್ಲಿ ಮೈಸೂರಿನ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಕೋರ್ಸ್‌ಗಾಗಿ, ಪಿಜಿಸಿಇಟಿ ಬರೆಯದೆ ಇರುವ ಬಿ.ಇ, ಮೆಕ್ಯಾನಿಕಲ್, ಇಂಡಸ್ಟ್ರೀಯಲ್ ಪ್ರೊಡಕ್ಷನ್, ಆಟೋಮೊಬೈಲ್, ಆಟೋಮೇಷನ್, ಮೇರಿನ್ ಇಂಜಿನಿಯರಿಂಗ್ ಮತ್ತು ರೋಬೋಟಿಕ್ಸ್ ಇಂಜಿನಿಯರಿಂಗ್ ಮುಂತಾದವುಗಳಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಎರಡು ವರ್ಷ ಅವಧಿಯ ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಪ್ರವೇಶಕ್ಕೆ ಅರ್ಜಿ ಯನ್ನು ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ. 93 ಮತ್ತು 94, ಬೆಳಗೊಳ ಕೈಗಾರಿಕಾ ಪ್ರದೇಶ, ಕೆ.ಆರ್.ಎಸ್ ರಸ್ತೆ, ಮೈಸೂರು, ಮೊಬೈಲ್ ನಂ.: 9243989954, 9141630303 ಅನ್ನು ಸಂಪರ್ಕಿಸುವಂತೆ ಮೈಸೂರುಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ವ್ಯವಸಾ್ಥಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story