ಉಡುಪಿ: ಅಂಗನವಾಡಿ ಕಾರ್ಯಕರ್ತೆಯರ ಆಯ್ಕೆ ಪಟ್ಟಿ ಪ್ರಕಟ; ಆಕ್ಷೇಪಣೆ ಆಹ್ವಾನ
ಉಡುಪಿ, ಜ.29: ಉಡುಪಿ ತಾಲೂಕು ಶಿಶು ಅಭಿವೃದ್ಧಿ ಯೋಜನೆಯ ಗ್ರಾಪಂ, ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯ ನೋಟೀಸ್ ಬೋರ್ಡಿನಲ್ಲಿ ಪ್ರಕಟಿಸಲಾಗಿದ್ದು, ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಇದ್ದಲ್ಲಿ ಫೆಬ್ರವರಿ 4ರೊಳಗೆ ಮೇಲಿನ ಕಚೇರಿಗೆ ಸಲ್ಲಿಸುವಂತೆ ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಬ್ರಹ್ಮಾವರ: ಬ್ರಹ್ಮಾವರ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯ ನೋಟೀಸ್ ಬೋರ್ಡಿನಲ್ಲಿ ಪ್ರಕಟಿಸಲಾಗಿದ್ದು, ಆಯ್ಕೆ ಪಟ್ಟಿಯ ಕುರಿತು ಆಕ್ಷೇಪಣೆ ಇದ್ದಲ್ಲಿ ಫೆ.4ರೊಳಗೆ ಕಚೇರಿಗೆ ಸಲ್ಲಿಸುವಂತೆ ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story