ಉಡುಪಿ ಜಿಲ್ಲೆ: ಕೋವಿಡ್ ಗೆ ನಾಲ್ವರು ಬಲಿ; 230 ಮಂದಿಗೆ ಕೊರೋನ ಸೋಂಕು
ಉಡುಪಿ, ಫೆ.1: ಮಂಗಳವಾರ ಉಡುಪಿ ಜಿಲ್ಲೆಯಲ್ಲಿ ಒಟ್ಟು ನಾಲ್ವರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ ಅಧಿಕೃತವಾಗಿ 500ಕ್ಕೇರಿದೆ. ಇಂದು ಜಿಲ್ಲೆಯಲ್ಲಿ ಕೋವಿಡ್‌ಗೆ ಪಾಸಿಟಿವ್ ಬಂದವರ ಸಂಖ್ಯೆ 230ಕ್ಕಿಳಿದಿದೆ. ದಿನದಲ್ಲಿ 984 ಮಂದಿ ಕೋವಿಡ್-19 ಸೋಂಕಿನಿಂದ ಗುಣಮುಖರಾದರೆ, ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 3721ಕ್ಕೆ ಇಳಿದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕುಂದಾಪುರದ 84 ಮತ್ತು 77 ವರ್ಷ ಪ್ರಾಯದ ಮಹಿಳೆಯರು, ಕಾರ್ಕಳ 48 ವರ್ಷದ ಪುರುಷ ಹಾಗೂ ಉತ್ತರ ಕನ್ನಡ ಜಿಲ್ಲೆಯ 67 ವರ್ಷ ಪ್ರಾಯದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ. ಇವರೆಲ್ಲರೂ ಕೋವಿಡ್ ರೋಗದ ಗುಣಲಕ್ಷಣದೊಂದಿಗೆ ಉಸಿರಾಟದ ತೊಂದರೆ, ನ್ಯುಮೋನಿಯಾ ದಿಂದ ಬಳಲುತಿದ್ದರು. 48 ವರ್ಷ ಪ್ರಾಯದ ಪುರುಷರಲ್ಲಿ ಇತರ ಕಾಯಿಲೆ ಗಳಿದ್ದು ಬಹುಅಂಗ ವೈಫಲ್ಯದಿಂದ ಮೃತಪಟ್ಟಿದ್ದಾರೆ.
ಇಂದು ಪಾಸಿಟಿವ್ ಬಂದ 230 ಮಂದಿಯಲ್ಲಿ 106 ಮಂದಿ ಪುರುಷರು ಹಾಗೂ 124 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 152 ಮಂದಿ ಉಡುಪಿ ತಾಲೂಕಿಗೆ, 25 ಮಂದಿ ಕುಂದಾಪುರ ಹಾಗೂ 50 ಮಂದಿ ಕಾರ್ಕಳ ತಾಲೂಕಿಗೆ ಸೇರಿದವರು. ಉಳಿದ ಮೂವರು ಹೊರಜಿಲ್ಲೆಯವರು.
ಪಾಸಿಟಿವ್ ಬಂದವರಲ್ಲಿ ಮೂವರನ್ನು ಕೋವಿಡ್ ಕೇರ್ ಸೆಂಟರ್‌ಗೆ ಸೇರಿಸಲಾಗಿದೆ. 13 ಮಂದಿಯನ್ನು ಕೋವಿಡ್ ಆಸ್ಪತ್ರೆಗೂ, 15 ಮಂದಿಯನ್ನು ಕೋವಿಡ್ ಹೆಲ್ತ್ ಆಸ್ಪತ್ರೆಗೆ ಸೇರಿಸಿದ್ದು, ಉಳಿದ 199 ಮಂದಿಗೆ ಅವರವರ ಮನೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ 148ಕ್ಕಿಳಿದಿದೆ. ಇವರಲ್ಲಿ 8 ಮಂದಿ ವೆಂಟಿಲೇಟರ್, 19 ಮಂದಿ ಐಸಿಯು ಹಾಗೂ 35 ಮಂದಿ ಎಚ್‌ಡಿಯು ಚಿಕಿತ್ಸೆಯಲ್ಲಿದ್ದಾರೆ.
ಸೋಮವಾರ 984 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಕೊರೋನದಿಂದ ಜ.1ರ ನಂತರ ಚೇತರಿಸಿ ಕೊಂಡವರ ಸಂಖ್ಯೆ 12492ಕ್ಕೇರಿದೆ. ನಿನ್ನೆ ಜಿಲ್ಲೆಯ ಒಟ್ಟು 1798 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಜ.1ರ ಬಳಿಕ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 16086 ಕ್ಕೇರಿದೆ.
ಜಿಲ್ಲೆಯಲ್ಲಿ ಇಂದು 1273 ಮಂದಿ ಮುನ್ನೆಚ್ಚರಿಕೆಯ ಒಂದು ಡೋಸ್ ಲಸಿಕೆಯನ್ನು ಪಡೆದಿದ್ದಾರೆ. ಇವರಲ್ಲಿ 60 ವರ್ಷ ಮೇಲಿನ 861 ಮಂದಿ ಇದ್ದಾರೆ. ಅದೇ ರೀತಿ 15-18ವರ್ಷದೊಳಗಿನ 5 ಮಂದಿ ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ. ಉಳಿದಂತೆ ಒಟ್ಟು 188 ಮಂದಿ ಮೊದಲ ಡೋಸ್ ಹಾಗೂ 1351 ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ.