ಉಡುಪಿ ಕೋರ್ಟ್ ಆವರಣದಲ್ಲಿ ನಿಲ್ಲಿಸಿದ್ದ ಸ್ಕೂಟರ್ ಕಳವು
ಸಾಂದರ್ಭಿಕ ಚಿತ್ರ
ಉಡುಪಿ, ಫೆ.6: ಉಡುಪಿ ಕೋರ್ಟ್ ಆವರಣದಲ್ಲಿ ಫೆ.5ರಂದು ಬೆಳಗ್ಗೆ ನಿಲ್ಲಿಸಲಾದ ಸ್ಕೂಟರ್ ಕಳವಾಗಿರುವ ಬಗ್ಗೆ ವರದಿಯಾಗಿದೆ.
ಕಲ್ಯಾಣಪುರ ಮೂಡಬೆಟ್ಟುವಿನ ರಾಜು ಅಂಚನ್ ಎಂಬವರು ತನ್ನ ಪತ್ನಿಯ ಕೆಎ-20-ಇಪಿ-2096 ನಂಬರಿನ ಟಿವಿಎಸ್ ಜುಪಿಟರ್ ಸ್ಕೂಟರ್ನ್ನು ಕೋರ್ಟ್ ಆವರಣದಲ್ಲಿ ನಿಲ್ಲಿಸಿ ನ್ಯಾಯಾಲಯದ ಕರ್ತವ್ಯಕ್ಕೆ ಹೋಗಿದ್ದು, ಸಂಜೆ ಕರ್ತವ್ಯ ಮುಗಿಸಿ ವಾಪಾಸು ಬಂದು ನೋಡಿದಾಗ ಸ್ಕೂಟರ್ ಕಳವಾಗಿರುವುದು ಕಂಡುಬಂದಿದೆ. ಇದರ ಮೌಲ್ಯ 35,000ರೂ. ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story