ಉಡುಪಿ ಜಿಲ್ಲೆ: 97 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆ
ಉಡುಪಿ, ಫೆ. 9: ಬುಧವಾರ ಜಿಲ್ಲೆಯ ಒಟ್ಟು 97 ಮಂದಿಯಲ್ಲಿ ಕೋವಿಡ್ ಸೋಂಕು ಹೊಸದಾಗಿ ಪತ್ತೆಯಾಗಿದೆ. ಸತತ 9 ದಿನಗಳ ಬಳಿಕ ಇಂದು ಜಿಲ್ಲೆ ಯಲ್ಲಿ ಕೊರೋನಕ್ಕೆ ಯಾರೂ ಬಲಿಯಾಗಿಲ್ಲ. ದಿನದಲ್ಲಿ 423 ಮಂದಿ ಸೋಂಕಿ ನಿಂದ ಚೇತರಿಸಿಕೊಂಡಿದ್ದರೆ, 1473 ಮಂದಿ ಸೋಂಕಿಗೆ ಸಕ್ರಿಯರಾಗಿದ್ದಾರೆ.
ಇಂದು ಪಾಸಿಟಿವ್ ಬಂದ 97 ಮಂದಿಯಲ್ಲಿ 53 ಮಂದಿ ಪುರುಷರು ಹಾಗೂ ಮಹಿಳೆಯರು. ಇವರಲ್ಲಿ 63 ಮಂದಿ ಉಡುಪಿ ತಾಲೂಕಿಗೆ, 12 ಮಂದಿ ಕುಂದಾಪುರ ಹಾಗೂ 21 ಮಂದಿ ಕಾರ್ಕಳ ತಾಲೂಕಿಗೆ ಸೇರಿದವರು. ಹೊರಜಿಲ್ಲೆಯ ಒಬ್ಬರು ಸಹ ಇಂದು ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಇವರಲ್ಲಿ 83 ಮಂದಿಗೆ ಅವರವರ ಮನೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ 87ಕ್ಕಿಳಿದಿದೆ.
ಮಂಗಳವಾರ 423 ಮಂದಿ ರೋಗಮುಕ್ತರಾಗಿದ್ದು, ಕೊರೋನದಿಂದ ಜ.1ರ ನಂತರ ಚೇತರಿಸಿಕೊಂಡವರ ಸಂಖ್ಯೆ 16397ಕ್ಕೇರಿದೆ. ನಿನ್ನೆ ಜಿಲ್ಲೆಯ ಒಟ್ಟು 2177 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಜ.1ರ ಬಳಿಕ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 17,761ಕ್ಕೇರಿದೆ.
4209 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು ಒಟ್ಟು 4209 ಮಂದಿ ಕೋವಿಡ್ ನಿಯಂತ್ರಣಕ್ಕಿರುವ ಲಸಿಕೆಯನ್ನು ಪಡೆದಿದ್ದಾರೆ. ಇವರಲ್ಲಿ 1105 60 ವರ್ಷ ಮೇಲಿನ ಹಿರಿಯ ನಾಗರಿಕರು ಸೇರಿದಂತೆ ಒಟ್ಟು 1229 ಮಂದಿ ಮುನ್ನೆಚ್ಚರಿಕೆ ಒಂದು ಡೋಸ್ ಲಸಿಕೆಯನ್ನು ಪಡೆದಿದ್ದಾರೆ.
ಜಿಲ್ಲೆಯಲ್ಲಿ ಇಂದು ಒಟ್ಟು 4209 ಮಂದಿ ಕೋವಿಡ್ ನಿಯಂತ್ರಣಕ್ಕಿರುವ ಲಸಿಕೆಯನ್ನು ಪಡೆದಿದ್ದಾರೆ. ಇವರಲ್ಲಿ 1105 60 ವರ್ಷ ಮೇಲಿನ ಹಿರಿಯ ನಾಗರಿಕರು ಸೇರಿದಂತೆ ಒಟ್ಟು 1229 ಮಂದಿ ಮುನ್ನೆಚ್ಚರಿಕೆ ಒಂದು ಡೋಸ್ ಲಸಿಕೆಯನ್ನು ಪಡೆದಿದ್ದಾರೆ. ಉಳಿದಂತೆ 1105 ಮಂದಿ ಮೊದಲ ಡೋಸ್ ಹಾಗೂ 1875 ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ. 15ರಿಂದ 18 ವರ್ಷದೊಳಗಿನವರಲ್ಲಿ 19 ಮಂದಿ ಮೊದಲ ಡೋಸ್ ಹಾಗೂ 305 ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ.