ಉಡುಪಿ ಜಿಲ್ಲೆ : 67 ಮಂದಿಗೆ ಕೊರೋನ ಪಾಸಿಟಿವ್
ಉಡುಪಿ, ಫೆ.12: ಜಿಲ್ಲೆಯಲ್ಲಿ ಶನಿವಾರ ಒಟ್ಟು 67 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ದಿನದಲ್ಲಿ ಚಿಕಿತ್ಸೆಯ ಬಳಿಕ 161 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದರೆ, ಸದ್ಯ ಚಿಕಿತ್ಸೆಯಲ್ಲಿರುವವರ ಸಂಖ್ಯೆ 765ಕ್ಕೆ ಇಳಿದಿದೆ.
ಇಂದು ಪಾಸಿಟಿವ್ ಬಂದ 67 ಮಂದಿಯಲ್ಲಿ ತಲಾ 36 ಮಂದಿ ಪುರುಷರು ಹಾಗೂ 31 ಮಂದಿ ಮಹಿಳೆಯರಿ ದ್ದಾರೆ. ಇವರಲ್ಲಿ 43 ಮಂದಿ ಉಡುಪಿ ತಾಲೂಕಿಗೆ, 13 ಮಂದಿ ಕುಂದಾಪುರ ಹಾಗೂ 9 ಮಂದಿ ಕಾರ್ಕಳ ತಾಲೂಕಿಗೆ ಸೇರಿದವರು. ಇಬ್ಬರು ಹೊರಜಿಲ್ಲೆಯವರು. ಪಾಸಿಟಿವ್ ಬಂದವರಲ್ಲಿ 60 ಮಂದಿಗೆ ಅವರವರ ಮನೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ 57ಕ್ಕಿಳಿದಿದೆ. ಇವರಲ್ಲಿ ಮೂವರು ವೆಂಟಿಲೇಟರ್ ಹಾಗೂ 9 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಇಂದು ಸಹ ಜಿಲ್ಲೆಯಲ್ಲಿ ಕೋವಿಡ್‌ಗೆ ಯಾರೂ ಬಲಿಯಾಗಿಲ್ಲ.
ಶುಕ್ರವಾರ 161 ಮಂದಿ ರೋಗಮುಕ್ತರಾಗಿದ್ದು, ಕೊರೋನದಿಂದ ಜ.1ರ ನಂತರ ಚೇತರಿಸಿಕೊಂಡವರ ಸಂಖ್ಯೆ 17324ಕ್ಕೇರಿದೆ. ನಿನ್ನೆ ಜಿಲ್ಲೆಯ ಒಟ್ಟು 1930 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಜ.1ರ ಬಳಿಕ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 17,980ಕ್ಕೇರಿದೆ.
2238 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು ಒಟ್ಟು 2238 ಮಂದಿ ಕೋವಿಡ್ ನಿಯಂತ್ರಣಕ್ಕಿರುವ ಲಸಿಕೆಯನ್ನು ಪಡೆದಿದ್ದಾರೆ. ಇವರಲ್ಲಿ 457 ಮಂದಿ 60 ವರ್ಷ ಮೇಲಿನ ಹಿರಿಯ ನಾಗರಿಕರು ಸೇರಿದಂತೆ ಒಟ್ಟು 543 ಮಂದಿ ಮುನ್ನೆಚ್ಚರಿಕೆ ಒಂದು ಡೋಸ್ ಲಸಿಕೆಯನ್ನು ಪಡೆದಿದ್ದಾರೆ.
ಉಳಿದಂತೆ 193 ಮಂದಿ ಮೊದಲ ಡೋಸ್ ಹಾಗೂ 1502 ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ. 15ರಿಂದ 18 ವರ್ಷದೊಳಗಿನವರಲ್ಲಿ 33 ಮಂದಿ ಮೊದಲ ಡೋಸ್ ಹಾಗೂ 853 ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ.