ಪೊಲೀಸರು ನೊಟೀಸ್ ಸಹ ನೀಡದೆ ನನ್ನ ಪತಿಯನ್ನು ಅಪಹರಿಸಿದ್ದಾರೆ: ನಟ ಚೇತನ್ ಪತ್ನಿ ಮೇಘ ಆರೋಪ
ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಹಾಗೂ ನಟ ಚೇತನ್‌ರನ್ನು ಪೊಲೀಸರು ಯಾವುದೇ ಮಾಹಿತಿ ನೀಡದೆ, ನೋಟಿಸ್ ನೀಡದೇ ಅಪಹರಿಸಿದ್ದಾರೆ ಎಂದು ಚೇತನ್ ಪತ್ನಿ ಮೇಘ ಆರೋಪಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆ ಎದುರು ಫೇಸ್‌ಬುಕ್ ಲೈವ್‌ನಲ್ಲಿ ಮಾಹಿತಿ ನೀಡಿರುವ ಮೇಘ ಅವರು, ಇಂದು ನಾನು ಮನೆಯಲ್ಲಿದ್ದೆ ಮಧ್ಯಾಹ್ನ 3 ಗಂಟೆಯಿಂದ ನನ್ನ ಪತಿ ಚೇತನ್ ಕಾಣುತ್ತಿಲ್ಲ, ಬಳಿಕ ನಮ್ಮ ಮನೆಯಲ್ಲಿ ಕೆಲಸ ಮಾಡುವವರು ಪೊಲೀಸರು ಕರೆದುಕೊಂಡು ಹೋಗಿರುವುದಾಗಿ ತಿಳಿಸಿದರು.
ಆದರೆ ಈ ಕುರಿತು ಪೊಲೀಸರು ಯಾವುದೇ ಮಾಹಿತಿ ನೀಡುತ್ತಿಲ್ಲ. ಚೇತನ್ ಅವರ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
Next Story