ಉಡುಪಿ: ಸತತ ನಾಲ್ಕನೇ ದಿನವೂ ಕೊರೋನ ಪಾಪಿಟಿವ್ ಶೂನ್ಯ
ಉಡುಪಿ : ಸತತ ನಾಲ್ಕನೇ ದಿನವೂ ಉಡುಪಿ ಜಿಲ್ಲೆಯ ಯಾರಲ್ಲೂ ಕೋವಿಡ್ ಸೋಂಕು ಪತ್ತೆಯಾಗಿಲ್ಲ. ಶನಿವಾರ ಜಿಲ್ಲೆಯ 951 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಯಾರಲ್ಲೂ ಸೋಂಕು ಪತ್ತೆಯಾಗಿಲ್ಲ. ಉಡುಪಿ ತಾಲೂಕಿನಲ್ಲಿ 727 ಮಂದಿ, ಕುಂದಾಪುರ ತಾಲೂಕಿನಲ್ಲಿ 152 ಹಾಗೂ ಕಾರ್ಕಳ ತಾಲೂಕಿನಲ್ಲಿ 72 ಮಂದಿ ಕೋವಿಡ್ ಸೋಂಕಿನ ಪರೀಕ್ಷೆಗೆ ಒಳಗಾಗಿದ್ದಾರೆ.
ದಿನದಲ್ಲಿ ಒಬ್ಬರು ಮಾತ್ರ ಸೋಂಕಿನಿಂದ ಚೇತರಿಸಿಕೊಂಡಿದ್ದು, ಸದ್ಯ ಚಿಕಿತ್ಸೆ ಯಲ್ಲಿರುವವರ ಸಂಖ್ಯೆ 30ಕ್ಕಿಳಿದಿದೆ. ಜ.1ರ ನಂತರ ಕೊರೋನಕ್ಕೆ ಪಾಸಿಟಿವ್ ಬಂದವರ ಸಂಖ್ಯೆ 18421 ಆದರೆ, ಚೇತರಿಸಿಕೊಂಡವರ ಸಂಖ್ಯೆ 18481 ಆಗಿದೆ. ಇಂದು ಸಹ ಜಿಲ್ಲೆಯಲ್ಲಿ ಸೋಂಕಿಗೆ ಯಾರೂ ಬಲಿಯಾಗಿಲ್ಲ. ಜಿಲ್ಲೆಯ ಯಾವುದೇ ಆಸ್ಪತ್ರೆಗಳಲ್ಲೂ ಯಾರೂ ಸಹ ಕೋವಿಡ್ಗೆ ಚಿಕಿತ್ಸೆ ಪಡೆಯುತ್ತಿಲ್ಲ.
2933 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು ಒಟ್ಟು 2933 ಮಂದಿ ಕೋವಿಡ್ ಲಸಿಕೆಯನ್ನು ಪಡೆದಿದ್ದಾರೆ. 60 ವರ್ಷ ಮೇಲಿನ 91 ಹಿರಿಯ ನಾಗರಿಕರು ಸೇರಿದಂತೆ ಒಟ್ಟು 105 ಮಂದಿ ಮುನ್ನೆಚ್ಚರಿಕೆ ಒಂದು ಡೋಸ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಉಳಿದಂತೆ 30 ಮಂದಿ ಮೊದಲ ಡೋಸ್ ಹಾಗೂ 2798 ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ.