ಮಂಗಳೂರು : ನಗರದ ಕಪಿತಾನಿಯೋ ನಿವಾಸಿ ಶರೋನ್ ಆಳ್ವ (೪೧) ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತರು ಪತ್ನಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಹ್ಯುಮಾನಿಟಿ ಫಸ್ಟ್ ಫೌಂಡೇಶನ್ನ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದುಕೊಂಡು ಹಲವು ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.