ಎಸಿಬಿಯಿಂದ ಅಹವಾಲು ಸ್ವೀಕಾರ
ಉಡುಪಿ : ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೋಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ಮಾ.29ರಂದು ಕುಂದಾಪುರ ಪ್ರವಾಸಿ ಮಂದಿರ ಮತ್ತು ಮಾ.30ರಂದು ಕಾರ್ಕಳ ಪ್ರವಾಸಿ ಮಂದಿರದಲ್ಲಿ ಬೆಳಗ್ಗೆ ೧೧ ರಿಂದ ಸಂಜೆ ೪:೩೦ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
ಸಾರ್ವಜನಿಕ ನೌಕರ ತನ್ನ ದಿನನಿತ್ಯದ ಕೆಲಸಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿದಲ್ಲಿ, ನಿರ್ಲಕ್ಷ್ಯತೆ ತೋರಿದಲ್ಲಿ ಅಥವಾ ಲಂಚ ಕೇಳಿದಲ್ಲಿ ದೂರು ಸ್ವೀಕರಿಸಲಾಗುವುದು ಎಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story