ಅರ್ಜಿ ಆಹ್ವಾನ
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಶ್ರವಣ ದೋಷವುಳ್ಳ ಎಸೆಸೆಲ್ಸಿ ವ್ಯಾಸಂಗ ಮಾಡಿರುವ ಅರ್ಹ ವಿಕಲಚೇತನ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಮತ್ತು ಎಸೆಸೆಲ್ಸಿ ಅಥವಾ ಉನ್ನತ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಮೊಬೈಲ್, ಬ್ರೈಲ್ ವಾಚ್, ವಾಕಿಂಗ್ ಸ್ಟಿಕ್ ಮತ್ತಿತರ ವಸ್ತುಗಳನ್ನೊಳಗೊಂಡ ಬ್ರೈಲ್ ಕಿಟ್ಗಳನ್ನು ೨೦೨೧-೨೨ ನೇ ಸಾಲಿನಲ್ಲಿ ವಿತರಿಸುವ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಫಲಾನುಭವಿಗಳು ಸೂಕ್ತ ದಾಖಲೆಗಳೊಂದಿಗೆ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕೊಟ್ಟಾರದ ಜಿಪಂನಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಅಥವಾ ದೂ.ಸಂ:೦೮೨೪-೨೪೫೮೧೭೩ನ್ನು ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಯ ಪ್ರಕಟನೆ ತಿಳಿಸಿದೆ.
Next Story