ಉಡುಪಿ; ಎಟಿಎಂ ಕಳವು ಯತ್ನ ಪ್ರಕರಣ: ಆರೋಪಿ ಬಂಧನ
ಹನುಮಂತ
ಉಡುಪಿ : ಕಳೆದ ತಿಂಗಳು ಅಂಬಾಗಿಲಿನಲ್ಲಿ ನಡೆದ ಎಟಿಎಂ ಕಳವು ಯತ್ನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ಉಡುಪಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಬೆಣ್ಣೆಕಲ್ಲು ನಿವಾಸಿ ಹನುಮಂತ(19) ಬಂಧಿತ ಆರೋಪಿ.
ಮಾ.7ರಂದು ರಾತ್ರಿ ಅಂಬಾಗಿಲು ಪೆರಂಪಳ್ಳಿ ಕ್ರಾಸ್ನ ಕೆನರಾ ಬ್ಯಾಂಕ್ ಎಟಿಎಂಗೆ ನುಗ್ಗಿದ ಕಳ್ಳರು, ಎಟಿಎಂ ಲಾಕರ್ ಡೋರನ್ನು ಮುರಿದು ಕಳವಿಗೆ ಪ್ರಯತ್ನಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ಆರೋಪಿಯನ್ನು ಹಗರಿಬೊಮ್ಮನಹಳ್ಳಿ ಯಲ್ಲಿ ಪತ್ತೆ ಹಚ್ಚಿ, ಠಾಣೆಗೆ ಕರೆತಂದು ಬಂಧಿಸಿದ್ದಾರೆ. ಬಳಿಕ ಆರೋಪಿ ಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.
ಉಡುಪಿ ಎಸ್ಪಿ ವಿಷ್ಣುವರ್ಧನ್ ಆದೇಶದಂತೆ ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ ಹಾಗೂ ಉಡುಪಿ ಡಿವೈಎಸ್ಪಿ ಸುಧಾಕರ ಸದಾನಂದ ನಾಯ್ಕ್ ಮಾರ್ಗದರ್ಶನ ದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಪ್ರಮೋದ ಕುಮಾರ್, ಎಸ್ಸೈಗಳಾದ ಮಹೇಶ್ ಟಿ.ಎಂ., ವಾಸಪ್ಪ ನಾಯ್ಕ್, ಎಎಸ್ಸೈ ವಿಜಯ ಸಿ. ಹಾಗೂ ಸಿಬ್ಬಂದಿ ಸತೀಶ, ಕಿರಣ್, ಸಂತೋಷ ರಾಠೋಡ್ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.