ಸಂತೋಷ್ ಪಾಟೀಲ್ ಆತ್ಮಹತ್ಯೆ; ಮರಣೋತ್ತರ ಪರೀಕ್ಷೆಯ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ: ಐಜಿಪಿ
ಉಡುಪಿ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಉಡುಪಿಯ ಶಾಂಭವಿ ಲಾಡ್ಜ್‌ಗೆ ಮಂಗಳೂರು ಪಶ್ಚಿಮ ವಲಯ ಐಜಿಪಿ ದೇವ ಜ್ಯೋತಿ ರೇ ಮಂಗಳವಾರ ಭೇಟಿ ನೀಡಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂತೋಷ್ ಕುಟುಂಬದವರ ಬರುವಿಕೆಗೆ ಕಾಯುತ್ತಿದ್ದೇವೆ. ಕುಟುಂಬದವರು ಬಂದನಂತರ ತನಿಖೆ ಆರಂಭವಾಗಲಿದೆ. ಈ ಪ್ರಕರಣ ಬಹಳ ಸೂಕ್ಷ್ಮವಾಗಿದೆ ಎಂದು ತಿಳಿಸಿದರು.
ಕುಟುಂಬಸ್ಥರು ಬಂದನಂತರ ನಮ್ಮ ವಿಧಿವಿಧಾನಗಳು ಆರಂಭ ಮಾಡುತ್ತೇವೆ. ನಾಳೆ ಮಾಧ್ಯಮಗಳಿಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇನೆ. ಮರಣೋತ್ತರ ಪರೀಕ್ಷೆಯ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಕುಟುಂಬಸ್ಥರು ಬಂದು ದೂರು ನೀಡಿದ ನಂತರ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದರು.
Next Story