ಕಾರು ಢಿಕ್ಕಿ: ಬೈಕ್ ಸವಾರ ಮೃತ್ಯು
ಕುಂದಾಪುರ : ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಕೊಟೇಶ್ವರ ಗ್ರಾಮದ ಅಂಕದಕಟ್ಟೆ ಸರ್ಜನ್ ಆಸ್ಪತ್ರೆಯ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎ.16ರಂದು ರಾತ್ರಿ 8.50ರ ಸುಮಾರಿಗೆ ನಡೆದಿದೆ.
ಮೃತರನ್ನು ರಘುರಾಮ ಕುಲಾಲ್ ಎಂದು ಗುರುತಿಸಲಾಗಿದೆ. ಉಮೇಶ್ ಹೆಬ್ಬಾರ್ ಎಂಬವರು ಕುಂದಾಪುರ ಕಡೆಯಿಂದ ಕೊಟೇಶ್ವರ ಕಡೆಗೆ ಚಲಾಯಿಸಿ ಕೊಂಡು ಬರುತ್ತಿದ್ದ ತನ್ನ ಕಾರನ್ನು ಇನ್ನೊಂದು ಬದಿಯ ರಸ್ತೆಗೆ ತಿರುಗಿಸಿ, ಅದೇ ದಿಕ್ಕಿನಲ್ಲಿ ಎದುರಿನಲ್ಲಿ ಹೋಗುತ್ತಿದ್ದ ಬೈಕಿಗೆ ಹಿಂದಿನಿಂದ ಢಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ರಘುರಾಮ ಕುಲಾಲ್ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story