varthabharthi


ಬೆಂಗಳೂರು

ಯುಎಇ ಅಧ್ಯಕ್ಷ ಶೇಖ್ ಖಲೀಫಾ ನಿಧನ: ಕರ್ನಾಟಕದಲ್ಲಿ ಒಂದು ದಿನದ ಶೋಕಾಚರಣೆ ಘೋಷಣೆ

ವಾರ್ತಾ ಭಾರತಿ : 14 May, 2022

ಬೆಂಗಳೂರು, ಮೇ 14: ಶುಕ್ರವಾರ ನಿಧನರಾದ ಸಂಯುಕ್ತ ಅರಬ್ ಗಣರಾಜ್ಯ(ಯುಎಇ)ದ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಝಾಯೆದ್ ಅಲ್ ನಹ್ಯಾನ್ ಅವರ ಗೌವರಾರ್ಥ ರಾಜ್ಯದಲ್ಲಿ ಇಂದು (ಮೇ14) ಒಂದು ದಿನದ ಶೋಕಾಚರಣೆಗೆ ಸರಕಾರ ಅಧಿಸೂಚನೆ ಹೊರಡಿಸಿದೆ.

ಶೇಖ್ ಖಲೀಫಾ ಅವರ ನಿಧನದ ಹಿನ್ನೆಲೆಯಲ್ಲಿ ಶನಿವಾರ ದೇಶಾದ್ಯಂತ ಶೋಕಾಚರಣೆ ನಡೆಸಲು ಭಾರತ ಸರಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದು ಒಂದು ದಿನದ ಶೋಕಾಚರಣೆ ಆಚರಿಸಲಾಗುವುದು. ಇಂದು ಯಾವುದೇ ಅಧಿಕೃತ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ ಹಾಗೂ ನಿಯತವಾಗಿ ರಾಷ್ಟ್ರಧ್ವಜವನ್ನು ಹಾರಿಸಲ್ಪಡುವ ಸರಕಾರದ ಎಲ್ಲ ಕಟ್ಟಡಗಳ ಮೇಲೆ ರಾಷ್ಟ್ರಧ್ಚಜವನ್ನು ಅರ್ಧಮಟ್ಟದಲ್ಲಿ ಹಾರಿಸುವಂತೆ ರಾಜ್ಯಪಾಲರ ಆಜ್ಞಾನುಸಾರ ಸರಕಾರದ ಅಪರ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ರಾಜ್ಯ ಶಿಷ್ಟಾಚಾರ ಇವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)