varthabharthi


ರಾಷ್ಟ್ರೀಯ

ಯುಎಇ ಅಧ್ಯಕ್ಷರ ನಿಧನಕ್ಕೆ ಒಂದು ದಿನದ ಶೋಕಾಚರಣೆ ಘೋಷಿಸಿದ ಭಾರತ

ವಾರ್ತಾ ಭಾರತಿ : 14 May, 2022

Photo: PTI

ಹೊಸದಿಲ್ಲಿ: ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಝಾಯೆದ್ ಅಲ್ ನಹ್ಯಾನ್ ಅವರ ನಿಧನದ ಹಿನ್ನೆಲೆಯಲ್ಲಿ ಭಾರತ  ಶನಿವಾರ ಒಂದು ದಿನದ ಶೋಕಾಚರಣೆಯನ್ನು ಘೋಷಿಸಿದೆ.

ಶುಕ್ರವಾರ ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳು ಹಾಗೂ  ಕೇಂದ್ರಾಡಳಿತ ಪ್ರದೇಶಗಳಿಗೆ ಕಳುಹಿಸಿದ ಪತ್ರದ  ಪ್ರಕಾರ, ಅಗಲಿದ ಗಣ್ಯರಿಗೆ ಗೌರವ ಸೂಚಕವಾಗಿ  ಭಾರತ ಸರಕಾರವು ಮೇ 14 ರಂದು ದೇಶಾದ್ಯಂತ ಒಂದು ದಿನದ ಶೋಕಾಚರಣೆಯನ್ನು ಆಚರಿಸಲು ನಿರ್ಧರಿಸಿದೆ. 

ಶೋಕಾಚರಣೆಯ  ದಿನವಾದ ಶನಿವಾರ  ಯಾವುದೇ ಅಧಿಕೃತ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ ಹಾಗೂ ನಿಯಮಿತವಾಗಿ ರಾಷ್ಟ್ರಧ್ವಜ ಹಾರಿಸಲ್ಪಡುವ ಸರಕಾರದ ಎಲ್ಲ ಕಟ್ಟಡಗಳ ಮೇಲೆ ರಾಷ್ಟ್ರಧ್ಚಜವನ್ನು ಅರ್ಧಮಟ್ಟದಲ್ಲಿ ಹಾರಿಸುವಂತೆ ಸೂಚಿಸಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)