varthabharthi


ಉಡುಪಿ

ಉಡುಪಿ: ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶ

ವಾರ್ತಾ ಭಾರತಿ : 15 May, 2022

ಉಡುಪಿ : ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಪ್ರಕೋಷ್ಠಗಳ ಸಮಾವೇಶವು ರವಿವಾರ ಉಡುಪಿಯ ಹೋಟೆಲ್ ಶಾರದಾ ಇಂಟರ್‌ನ್ಯಾಶನಲ್ ಸಭಾಂಗಣದಲ್ಲಿ ನಡೆಯಿತು.

ಸಮಾರಂಭವನ್ನು ಉಡುಪಿ ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಿದರು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷೆ ವಹಿಸಿದ್ದರು. ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ, ರಾಜ್ಯ ಕೈಗಾರಿಕಾ ಪ್ರಕೋಷ್ಠದ ಸಹ ಸಂಚಾಲಕ ಗುಂಜೂರು ಚರಣ್ ಮೊದಲಾದ ವರು ಉಪಸ್ಥಿತರಿದ್ದರು.

ರಾಜ್ಯ ಕೈಗಾರಿಕಾ ಪ್ರಕೋಷ್ಠದ ಸಂಚಾಲಕ ಪ್ರದೀಪ್ ಜಿ. ಪೈ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಜಿಲ್ಲಾ ಪ್ರಕೋಷ್ಠ ಗಳ ಸಂಯೋಜಕ ವಿಜಯ್ ಕುಮಾರ್ ಉದ್ಯಾವರ ಸ್ವಾಗತಿಸಿದರು, ವೈದ್ಯಕೀಯ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಡಾ.ವಿಜಯೇಂದ್ರ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು ವಂದಿಸಿದರು.

ಪಕ್ಷ ಸಂಘಟನೆಯಲ್ಲಿ ಪ್ರಕೋಷ್ಠಗಳ ಪಾತ್ರ ಈ ವಿಷಯದ ಬಗ್ಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹಾಗೂ ೨೦೧೪ರ ನಂತರ ಭಾರತದ ವಿಕಾಸದ ವಿಷಯದ ಬಗ್ಗೆ ರಾಜ್ಯ ಕೈಗಾರಿಕಾ ಪ್ರಕೋಷ್ಠದ ಸಹ ಸಂಚಾಲಕ ಗುಂಜೂರು ಚರಣ್ ಮಾತನಾಡಿದರು.

ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷೆತೆಯನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ವಹಿಸಿದ್ದರು. ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಸಮಾರೋಪ ಭಾಷಣಗೈದರು.

ಕಾಪು ಶಾಸಕ ಲಾಲಾಜಿ ಆರ್  ಮೆಂಡನ್, ರಾಜ್ಯ ಕೈಗಾರಿಕಾ ಪ್ರಕೋಷ್ಠದ ಸಂಚಾಲಕ ಪ್ರದೀಪ್ ಜಿ ಪೈ, ಸಹ ಸಂಚಾಲಕ ಗುಂಜೂರು ಚರಣ್, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ವಿಜಯ್ ಕುಮಾರ್ ಉದ್ಯಾವರ, ಜಗದೀಶ್ ಆಚಾರ್ಯ ಕಪ್ಪೆಟ್ಟು ಉಪಸ್ಥಿತರಿದ್ದರು.

ಜಿಲ್ಲಾ ಕಾನೂನು ಪ್ರಕೋಷ್ಠದ ಸಂಚಾಲಕ ಕೈಲಾಡಿ ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಮಾಧ್ಯಮ ಪ್ರಕೋಷ್ಠದ ಸಂಚಾಲಕ ಶ್ರೀನಿಧಿ ಹೆಗ್ಡೆ ಕಾರ್ಯಕ್ರಮ ನೀರೂಪಿಸಿ ವಂದಿಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)